ನೆಹೆಮೀಯ 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಲಿನ ಮುಂದಿನ ಬೈಲಿನಲ್ಲಿ ಒಟ್ಟಾಗಿ ಕೂಡಿಬಂದು - ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲ್ಯರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕು ಎಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು. ಅಧ್ಯಾಯವನ್ನು ನೋಡಿ |