Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ, ಯಾಜಕರೂ, ಲೇವಿಯರೂ ಧರ್ಮನಿಯಮಗಳ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮರುದಿನ ಎಲ್ಲ ಇಸ್ರಯೇಲ್ ಗೋತ್ರಪ್ರಧಾನರು, ಯಾಜಕರು ಹಾಗು ಲೇವಿಯರು ಧರ್ಮಶಾಸ್ತ್ರದ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರದ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಕೂಡಿಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ತಿಂಗಳ ಎರಡನೆಯ ದಿನದಲ್ಲಿ ಗೋತ್ರಪ್ರಧಾನರೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರವನ್ನು ಅಭ್ಯಾಸಿಸಲು ಉಪದೇಶಕನಾದ ಎಜ್ರನ ಸುತ್ತಲೂ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎರಡನೆಯ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿರುವ ಮುಖ್ಯವಾದವರೂ ಯಾಜಕರೂ ಲೇವಿಯರೂ ದೇವರ ನಿಯಮದ ಮಾತುಗಳನ್ನು ತಿಳಿದುಕೊಳ್ಳುವ ಹಾಗೆ, ನಿಯಮಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:13
13 ತಿಳಿವುಗಳ ಹೋಲಿಕೆ  

ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.


ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.


ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.


ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,


ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು


ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.


ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದ ಪ್ರಕಾರ ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲರು ಬಿಡಾರಗಳಲ್ಲಿ ವಾಸಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು