Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಆಜ್ಞಾನುಸಾರ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ, ನೀರುಬಾಗಿಲು, ಹಾಗು ಎಫ್ರಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಕುಟೀರಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಲು, ಎಫ್ರಾಯೀಮ್ ಬಾಗಲು ಇವುಗಳ ಮುಂದಣ ಬೈಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ಜನರು ಹೊರಟುಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ಅವರವರು ತಮ್ಮ ಮನೆಗಳ ಮೇಲೆಯೂ, ತಮ್ಮ ಅಂಗಳಗಳಲ್ಲಿಯೂ, ದೇವರ ಮನೆಯ ಅಂಗಳಗಳಲ್ಲಿಯೂ, ನೀರು ಬಾಗಿಲ ಬೀದಿಗಳಲ್ಲಿಯೂ, ಎಫ್ರಾಯೀಮನ ಬಾಗಿಲ ಬೀದಿಗಳಲ್ಲಿಯೂ ತಮಗೆ ಪರ್ಣಶಾಲೆಗಳನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:16
12 ತಿಳಿವುಗಳ ಹೋಲಿಕೆ  

ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.


ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಯನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು.


ಇವರು ಬುಗ್ಗೆ ಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನು ಅನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.


ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು.


ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು.


ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”


ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.


ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,


ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು