Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಲಿಸಿದಿರಿ ಅವರಿಗೆ ಆಜ್ಞಾವಿಧಿ ಧರ್ಮಗಳನು ಪ್ರಕಟಿಸಿದಿರಿ ನಿಮಗೆ ಮೀಸಲಾದ ವಿಶ್ರಾಂತಿ ದಿನವನು; ನಿಮ್ಮ ದಾಸ ಮೋಶೆಯ ಮುಖಾಂತರ ಸಾಧಿಸಿದಿರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ ಆಜ್ಞಾವಿಧಿಧರ್ಮಗಳನ್ನು ಕಲಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಪರಿಶುದ್ಧ ಸಬ್ಬತ್ ದಿನವನ್ನು ಅವರಿಗೆ ತಿಳಿಸಿ, ನಿಮ್ಮ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ, ನಿಯಮಗಳನ್ನೂ ಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:14
17 ತಿಳಿವುಗಳ ಹೋಲಿಕೆ  

ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.


ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು” ಎಂದು ಹೇಳಿದೆನು.


ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.


ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;


ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.


ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.


ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ವರ್ಷಕ್ಕೆ ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು