ನೆಹೆಮೀಯ 9:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರಾದರೋ ಎರಕದ ಹೋರಿಕರುವನು ಮಾಡಿಕೊಂಡರು ತಮ್ಮನು ಈಜಿಪ್ಟಿನಿಂದ ಕರೆತಂದುದು ಅದೇ ಎಂದುಕೊಂಡರು. ಈ ಪರಿಯ ವರ್ತನೆಯಿಂದ ನಿಮ್ಮನ್ನೇ ಅಸಡ್ಡೆಮಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು - [ಇಸ್ರಾಯೇಲ್ಯರೇ,] ನಿಮ್ಮನ್ನು ಐಗುಪ್ತದಿಂದ ಕರಕೊಂಡು ಬಂದ ದೇವರು ಇದೇ ಎಂದು ಹೇಳಿ ನಿನ್ನನ್ನು ಅಸಡ್ಡೆ ಮಾಡಿದಾಗಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ಬಂಗಾರದಿಂದ ಕರುವಿನಾಕೃತಿಯ ವಿಗ್ರಹವನ್ನು ಮಾಡಿ, ‘ಈ ವಿಗ್ರಹವೇ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದದ್ದು’ ಎಂದು ಹೇಳಿದರೂ ನೀನು ಅವರನ್ನು ತೊರೆದುಬಿಡಲಿಲ್ಲ. ಅವರು ನಿನಗೆ ವಿರೋಧವಾಗಿ ದೂಷಿಸಿ ಪಾಪಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಅವರು ತಮಗೋಸ್ಕರ ಒಂದು ಎರಕದ ಕರುವನ್ನು ಮಾಡಿಕೊಂಡರು. ‘ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ,’ ಎಂದು ಹೇಳಿ, ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು. ಅಧ್ಯಾಯವನ್ನು ನೋಡಿ |