Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘ ಸ್ತಂಭವೂ ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕು ಕೊಡುತ್ತಿದ್ದ ಅಗ್ನಿಸ್ತಂಭವೂ ಅವರನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:19
23 ತಿಳಿವುಗಳ ಹೋಲಿಕೆ  

ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.


“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”


ಹಗಲಿನಲ್ಲಿ ಮೇಘಸ್ತಂಭವಾಗಿಯೂ, ರಾತ್ರಿ ವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭವಾಗಿಯೂ ಅವರ ಮುಂದೆ ನೀನು ನಡೆದೆ.


ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.


ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.


ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.


“ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.


‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.


ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.


ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.


ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.


ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು.


ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು