ನೆಹೆಮೀಯ 9:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ರಾಜ್ಯಗಳನು, ಜನಾಂಗಗಳನು ವಶಪಡಿಸಿದಿರಿ ಅವರಿಗೆ ಹಂಚಿಕೊಟ್ಟಿರಿ ಆ ರಾಷ್ಟ್ರಗಳ ಸೊತ್ತುಗಳನೆ ಹೆಷ್ಬೋನಿನ ಅರಸ ಸೀಹೋನನಿಗೆ, ಬಾಷಾನಿನ ಅರಸ ಓಗನಿಗೆ, ಸೇರಿದ ಪ್ರಾಂತ್ಯಗಳಿಗೆ ಸ್ವಾಧೀನಪಡಿಸಿಕೊಂಡರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ರಾಜ್ಯಜನಾಂಗಗಳನ್ನು ಅವರಿಗೆ ವಶಪಡಿಸಿ ಆ ರಾಜ್ಯಗಳನ್ನು ಅವರಿಗೆ ಸ್ವಾಸ್ತ್ಯವನ್ನಾಗಿ ಹಂಚಿಕೊಟ್ಟಿ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತಗಳನ್ನು ಸ್ವಾಧೀನಪಡಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನೇ, ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಕೊಟ್ಟೆ. ಕೆಲವೇ ಜನರು ವಾಸವಾಗಿದ್ದ ಬಹುದೂರದ ಸ್ಥಳಗಳನ್ನು ಕೊಟ್ಟೆ. ಹೆಷ್ಬೋನಿನ ರಾಜನಾದ ಸೀಹೋನನ ನಾಡನ್ನು ಮತ್ತು ಬಾಷಾನಿನ ರಾಜನಾದ ಓಗನ ನಾಡನ್ನು ಅವರು ಪಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ನೀವು ಅವರಿಗೆ ರಾಜ್ಯಗಳನ್ನೂ, ಜನಾಂಗಗಳನ್ನೂ ವಶಪಡಿಸಿದಿರಿ. ಅವರಿಗೆ ಮೇರೆಗಳನ್ನು ವಿಭಾಗಿಸಿ ಕೊಟ್ಟಿರಿ. ಆಗ ಅವರು, ಹೆಷ್ಬೋನಿನ ಅರಸನಾದ ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಸ್ವಾಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿ |