Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಂತೆಯೇ ಸೇರಿ ಸ್ವಾಧೀನಮಾಡಿಕೊಂಡರು ಆ ನಾಡನು ಅವರಿಗಧೀನಪಡಿಸಿದಿರಿ ಅದರ ರಾಜರನು, ಪ್ರಜೆಗಳನು, ನಿವಾಸಿಗಳನು, ಆ ಕಾನಾನ್ಯರನು, ತಮಗಿಷ್ಟಾನುಸಾರ ನಡೆಸಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಆ ದೇಶದಲ್ಲಿ ಸೇರಿ ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. ಆ ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು ಮಾಡುವಂತೆ ಅವರಿಗೇ ಅವಕಾಶಮಾಡಿಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹಾಗೆಯೇ ಇಸ್ರಾಯೇಲರು ಹೋಗಿ, ಆ ದೇಶವನ್ನು ಸ್ವಾಧೀನಮಾಡಿಕೊಂಡರು. ನೀವು ಆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಅವರ ಮುಂದೆ ಕುಗ್ಗಿಸಿ, ಅವರಿಗೆ ಸರಿತೋರಿದ ಪ್ರಕಾರ ಮಾಡುವುದಕ್ಕೆ ಅವರನ್ನೂ, ಅವರ ಅರಸರನ್ನೂ, ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:24
13 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.


ಆತನು ಅವರಿಗೆ, “ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.


ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.


ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.


ಆ ದಿನದಲ್ಲಿ ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದನು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.


ಎಗ್ಲೋನಿನ ಅರಸನು - 1 ಗೆಜೆರಿನ ಅರಸನು - 1


ತಿರ್ಚದ ಅರಸನು - 1 ಒಟ್ಟು 31 ಮಂದಿ ಅರಸರು.


ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು