Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:26
35 ತಿಳಿವುಗಳ ಹೋಲಿಕೆ  

ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ,


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.


ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.


“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


“ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ,


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.


ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.


“ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.


“ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷಮಿಸಲಿಲ್ಲ.


ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ,


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು