Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಎಂದೇ ನೀವಿತ್ತಿರಿ ಅವರನು ಕ್ರೂರ ಶತ್ರುಗಳ ವಶಕೆ ಆದರೆ ಸಂಕಟದಲಿ ಮೊರೆಯಿಡಲು, ಪರದಿಂದ ಕಿವಿಗೊಟ್ಟಿರವರಿಗೆ! ರಕ್ಷಕರನು ಕಳುಹಿಸಿದಿರಿ ಕರುಣಾತಿಶಯದಿಂದ ಈ ಪರಿ ಬಿಡಿಸಿದಿರಿ ವಿರೋಧಿಗಳ ಕೈಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದದರಿಂದ ನೀನು ಅವರನ್ನು ಬಾಧಿಸುವ ವಿರೋಧಿಗಳ ಕೈಗೆ ಒಪ್ಪಿಸಿದಿ. ಅವರು ಆ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಬಿಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:27
19 ತಿಳಿವುಗಳ ಹೋಲಿಕೆ  

ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು.


ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.


ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.


ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.


ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು