ನೆಹೆಮೀಯ 9:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಉಪಶಮನವನ್ನು ಪಡೆದ ಮೇಲೆ ಅವರು ತಿರುಗಿ ದ್ರೋಹಿಗಳಾಗಿ ನಡೆಯುತ್ತಿರುವುದನ್ನು ನೀನು ಕಂಡು ಅವರ ಮೇಲೆ ದೊರೆತನ ನಡೆಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದೆ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪುನಃ ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಶಾಂತಿ ಸವಿದದ್ದೇ ದ್ರೋಹಿಗಳಾಗಿ ನಡೆದರು ಮತ್ತೆ ನೀವಿತ್ತಿರವರನು ದೊರೆತನ ನಡೆಸುವ ವೈರಿಗಳ ಕೈಗೆ. ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು, ಆಲಿಸಿದಿರಿ ಪರದಿಂದ ರಕ್ಷಿಸಿದಿರಿ ಪದೇ ಪದೇ ಅಪರಿಮಿತ ಕರುಣೆಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಉಪಶಮನವನ್ನು ಪಡೆದ ಮೇಲೆ ಅವರು ತಿರಿಗಿ ದ್ರೋಹಿಗಳಾಗಿ ನಡೆಯುತ್ತಿರುವದನ್ನು ನೀನು ಕಂಡು ಅವರ ಮೇಲೆ ದೊರೆತನ ನಡಿಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದಿ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಮ್ಮ ಪೂರ್ವಿಕರಿಗೆ ವಿಶ್ರಾಂತಿ ಸಿಕ್ಕಿದ ಕೂಡಲೇ ಅವರು ಮತ್ತೆ ದುಷ್ಕೃತ್ಯಗಳನ್ನು ಮಾಡಲಾರಂಭಿಸಿದರು. ಆದ್ದರಿಂದ ಆ ವೈರಿಗಳು ಅವರನ್ನು ಸೋಲಿಸಿ ಶಿಕ್ಷಿಸುವಂತೆ ನೀನು ಮಾಡಿದೆ. ಅವರು ನಿನ್ನ ಸಹಾಯಕ್ಕಾಗಿ ಮೊರೆಯಿಟ್ಟರು. ಪರಲೋಕದಲ್ಲಿ ನೀನು ಅವರ ಮೊರೆಯನ್ನು ಕೇಳಿ ಅವರಿಗೆ ಸಹಾಯಮಾಡಿದೆ. ನೀನು ದಯಾಳು! ಈ ರೀತಿ ಅನೇಕಸಲ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದಕಾರಣ ಅವರ ಶತ್ರುಗಳು ಅವರನ್ನು ಮತ್ತೆ ಆಳುವಂತೆ ಶತ್ರು ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ಅವರು ತಿರುಗಿ ನಿಮ್ಮನ್ನು ಕೂಗಿಕೊಳ್ಳಲು, ನೀವು ಪರಲೋಕದಿಂದ ಕೇಳಿ, ನಿಮ್ಮ ಅನುಕಂಪಕ್ಕೆ ಅನುಸಾರವಾಗಿ ಅವರನ್ನು ಅನೇಕ ಸಾರಿ ವಿಮೋಚಿಸಿದಿರಿ. ಅಧ್ಯಾಯವನ್ನು ನೋಡಿ |