ನೆಹೆಮೀಯ 9:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಎಚ್ಚರಿಸಿದಿ. ಆದರೂ ಅವರು ಲಾಲಿಸದೆ ಗರ್ವಿಗಳೂ ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು; ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿ ನ್ಯಾಯಗಳನ್ನು ಮೀರಿ ಪಾಪಮಾಡಿ ಹೆಗಲು ಕೊಡದೆ ಮೊಂಡಬಿದ್ದು ನಿನ್ನ ಮಾತನ್ನು ಕೇಳದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು. ಅಧ್ಯಾಯವನ್ನು ನೋಡಿ |
ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.