Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳದಲ್ಲೇ ನಿಂತು, ತಮ್ಮ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರಗ್ರಂಥವನ್ನು ಪಾರಾಯಣ ಮಾಡಿಸಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಸರ್ವೇಶ್ವರನಿಗೆ ಅಡ್ಡಬಿದ್ದು ಪಾಪಗಳನ್ನು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರ ಗ್ರಂಥವನ್ನು ಪಾರಾಯಣ ಮಾಡಿಸಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೂರು ತಾಸಿನ ತನಕ ಅವರು ನಿಂತುಕೊಂಡೇ ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ತಮ್ಮ ಸ್ಥಳಗಳಲ್ಲಿ ನಿಂತು ಮೂರು ತಾಸುಗಳು ತಮ್ಮ ದೇವರಾಗಿರುವ ಯೆಹೋವ ದೇವರ ನಿಯಮದ ಗ್ರಂಥವನ್ನು ಓದಿದರು. ಮತ್ತೊಂದು ಮೂರು ತಾಸುಗಳು ತಮ್ಮ ಪಾಪಗಳನ್ನು ಅರಿಕೆಮಾಡಿ, ತಮ್ಮ ದೇವರಾಗಿರುವ ಯೆಹೋವ ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:3
4 ತಿಳಿವುಗಳ ಹೋಲಿಕೆ  

ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು