Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಈ ಎಲ್ಲ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಮುಖಂಡರು, ಲೇವಿಯರು ಹಾಗು ಯಾಜಕರು ಸಹಿಮಾಡಿ, ಮುದ್ರೆಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಈ ಎಲ್ಲಾ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಪ್ರಭುಗಳೂ ಲೇವಿಯರೂ ಯಾಜಕರೂ ಸಹಿಮಾಡಿ ಮುದ್ರೆಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 “ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 “ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:38
10 ತಿಳಿವುಗಳ ಹೋಲಿಕೆ  

ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ,


ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:


ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.


ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.


ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.


ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.


ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.


ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.


(ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು