Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:5
36 ತಿಳಿವುಗಳ ಹೋಲಿಕೆ  

ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.


ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.


ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.


ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.


ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.


ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.


ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?


ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.


ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.


ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.


ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.


ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?


ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,


ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ,


ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.


“ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.


ಯೇಷೂವ, ಬಾನೀ ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.


ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.


ಯೆಹೋವನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಅಂದನು.


ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.


“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.


ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.


ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.


“ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು