Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ ಅದರ ಸೈನ್ಯವನ್ನೂ ಭೂವಿುಯನ್ನೂ ಅದರ ಮೇಲಿರುವದನ್ನೂ ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟು ಮಾಡಿ ಸಮಸ್ತ ಪ್ರಾಣಿಗಳ ಜೀವಾಧಾರನಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:6
43 ತಿಳಿವುಗಳ ಹೋಲಿಕೆ  

“ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.


ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.


ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.


ಇಸ್ರಾಯೇಲರೇ, ಕೇಳಿರಿ, ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು;


ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.


ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.


ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.


ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,


ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು.


ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,


ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.


ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ.


ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.


ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,


ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು