Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನು ಯೆಹೂದ್ಯರ ಸಂಗಡ ಇದ್ದದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದದರಿಂದ ಅವರನ್ನು ಹೊರಡಿಸುವದು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೂದ್ಯರು ಯುದ್ಧಮಾಡುವಾಗ ಯೆಹೋವನು ಅವರ ಸಂಗಡ ಇದ್ದುದರಿಂದ ಅವರು ಬೆಟ್ಟಪ್ರದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ಕಣಿವೆಯಲ್ಲಿ ವಾಸ ಮಾಡುತ್ತಿದ್ದ ಜನರಲ್ಲಿ ಕಬ್ಬಿಣದ ರಥಗಳಿದ್ದದರಿಂದ ಯೆಹೂದ್ಯರು ಅವರನ್ನು ಸೋಲಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಯೆಹೂದ ಗೋತ್ರದವರ ಸಂಗಡ ಇದ್ದುದರಿಂದ, ಅವರು ಬೆಟ್ಟದ ಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿಣದ ರಥಗಳಿದ್ದುದರಿಂದ, ಅವರು ಅವರನ್ನು ಹೊರಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:19
34 ತಿಳಿವುಗಳ ಹೋಲಿಕೆ  

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.


ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ


ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.


ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.


ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.


ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.


ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.


ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.


ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು.


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,


ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು