ನ್ಯಾಯಸ್ಥಾಪಕರು 1:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇವರು ಆ ಊರೊಳಗಿಂದ ಬರುತ್ತಿದ್ದ ಒಬ್ಬ ವ್ಯಕ್ತಿಯನ್ನು ಕಂಡು, “ದಯಮಾಡಿ, ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸಿಕೊಡು; ನಾವು ನಿನಗೆ ಒಳ್ಳೆಯದನ್ನೇ ಮಾಡುತ್ತೇವೆ,” ಎಂದರು. ಅವನು ಅವರಿಗೆ ಆ ದಾರಿಯನ್ನು ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು ಆ ಊರೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ - ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆ ತೋರಿಸುವೆವು ಎಂದು ಹೇಳಲು ಅವನು ಅಂಥ ದಾರಿಯನ್ನು ತೋರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ಗೂಢಚಾರರು ಬೇತೇಲ್ ನಗರದಲ್ಲಿ ಸಂಚರಿಸುತ್ತಿದ್ದಾಗ ಒಬ್ಬನು ನಗರದಿಂದ ಹೊರಬರುವುದನ್ನು ನೋಡಿದರು. ಗೂಢಚಾರರು ಅವನಿಗೆ, “ನಮಗೆ ಈ ನಗರದೊಳಗೆ ಹೋಗಲು ಮಾಡಿರುವ ಗುಪ್ತಮಾರ್ಗವನ್ನು ತೋರಿಸು. ನಾವು ಈ ಪಟ್ಟಣದ ಮೇಲೆ ಧಾಳಿ ಮಾಡಬೇಕೆಂದಿದ್ದೇವೆ. ನೀನು ನಮಗೆ ಸಹಾಯ ಮಾಡಿದರೆ ನಿನಗೆ ದಯೆತೋರುವೆವು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಗೂಢಚಾರರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು. ನಾವು ನಿನಗೆ ಕರುಣೆ ತೋರಿಸುವೆವು,” ಎಂದರು. ಅಧ್ಯಾಯವನ್ನು ನೋಡಿ |