ನ್ಯಾಯಸ್ಥಾಪಕರು 1:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಮನಸ್ಸೆಯವರು ಬೇತ್‍ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬೇತ್‌ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು ವಾಸವಾಗಿದ್ದರು. ಕಾನಾನ್ಯರನ್ನು ಈ ನಗರಗಳಿಂದ ಹೊರದೂಡುವುದು ಮನಸ್ಸೆ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು. ಅಧ್ಯಾಯವನ್ನು ನೋಡಿ |