ನ್ಯಾಯಸ್ಥಾಪಕರು 1:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳನ್ನು ಸ್ವತಂತ್ರಿಸಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು. ಮತ್ತು ಆ ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಫ್ತಾಲ್ಯರು ಬೇತ್‍ಷೆಮೆಷ್, ಬೇತನಾತ್ ಎಂಬ ಊರುಗಳನ್ನು ಸ್ವತಂತ್ರಿಸಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು. ಮತ್ತು ಆ ಬೇತ್‍ಷೆಮೆಷ್ ಬೇತನಾತ್ ಊರುಗಳ ಜನರು ಅವರಿಗೆ ದಾಸರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಫ್ತಾಲ್ಯರಿಗೂ ಹೀಗೆಯೇ ಆಯಿತು. ನಫ್ತಾಲ್ಯರು ಅಲ್ಲಿಯ ಜನರನ್ನು ಬೇತ್‌ಷೆಮೆಷ್, ಬೇತನಾತ್ ನಗರಗಳಿಂದ ಹೊರದೂಡಲಿಲ್ಲ. ಹೀಗಾಗಿ ನಫ್ತಾಲ್ಯರು ಆ ನಗರಗಳ ಜನರೊಡನೆ ವಾಸಮಾಡ ತೊಡಗಿದರು. ಆ ಕಾನಾನ್ಯರು ನಫ್ತಾಲ್ಯರ ಗುಲಾಮರಾಗಿ ಕೆಲಸ ಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಫ್ತಾಲಿ ಗೋತ್ರದವರು ಬೇತ್ ಷೆಮೆಷ್ ವಾಸಿಗಳನ್ನೂ ಹೊರಡಿಸಿಬಿಡದೆ, ಆ ದೇಶವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ ಷೆಮೆಷ್, ಬೇತ್ ಅನಾತ್ ಪಟ್ಟಣ ವಾಸಿಗಳು ಅವರಿಗೆ ದಾಸರಾದರು. ಅಧ್ಯಾಯವನ್ನು ನೋಡಿ |