Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಒಪ್ಪಿ ಯೆಹೂದ ಕುಲದವರ ಜೊತೆ ಯುದ್ಧಕ್ಕೆ ಹೋದರು. ಸರ್ವೇಶ್ವರ ಕಾನಾನ್ಯರನ್ನು ಹಾಗು ಪೆರಿಜ್ಜೀಯರನ್ನು ಅವರ ಕೈವಶ ಮಾಡಲು ಅವರು ಹತ್ತುಸಾವಿರ ಶತ್ರುಗಳನ್ನು ಬೆಜೆಕಿನಲ್ಲಿ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕಿನಲ್ಲಿ ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸುವುದರಲ್ಲಿ ಯೆಹೂದ್ಯರಿಗೆ ಸಹಾಯ ಮಾಡಿದನು. ಯೆಹೂದ್ಯರು ಬೆಜೆಕ್ ನಗರದಲ್ಲಿ ಹತ್ತು ಸಾವಿರ ಜನರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:4
17 ತಿಳಿವುಗಳ ಹೋಲಿಕೆ  

ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.


ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.


ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ’ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆ ಎಂಬುದಕ್ಕೆ ಇದೇ ಗುರುತು ಎಂದು ತಿಳಿದು ಮೇಲೆ ಹೋಗೋಣ” ಎಂದನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.


ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.


ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು.


ಅವರು ಅಲ್ಲಿ ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು.


ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.


ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,


ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು