ನ್ಯಾಯಸ್ಥಾಪಕರು 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಅದೋನೀಬೆಜೆಕನು - ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ ಅಂದನು. ಅವರು ಅವನನ್ನು ಯೆರೂಸಲೇವಿುಗೆ ತೆಗೆದುಕೊಂಡು ಬರಲು ಅಲ್ಲಿ ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು. ಅಧ್ಯಾಯವನ್ನು ನೋಡಿ |