Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಬೀಮೆಲೆಕನ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಎದ್ದು ಇಸ್ರಯೇಲರನ್ನು ಕಾಪಾಡಿದನು. ಅವನು ಎಫ್ರಯಿಮ್ ಮಲೆನಾಡಿನ ಶಾಮೀರವೆಂಬ ಊರಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಬೀಮೆಲೆಕನ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಎದ್ದು ಇಸ್ರಾಯೇಲ್ಯರನ್ನು ರಕ್ಷಿಸಿದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬೀಮೆಲೆಕನು ಸತ್ತ ತರುವಾಯ ಇಸ್ರೇಲರನ್ನು ರಕ್ಷಿಸಲು ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ತೋಲ. ತೋಲನು ಪೂವನ ಮಗನು. ಪೂವನು ದೋದೋ ಎಂಬವನ ಮಗನು. ತೋಲನು ಇಸ್ಸಾಕಾರ್ ಕುಲಕ್ಕೆ ಸೇರಿದವನೂ ಶಾಮೀರ ನಗರದ ವಾಸಿಯೂ ಆಗಿದ್ದನು. ಶಾಮೀರ ನಗರವು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲರನ್ನು ರಕ್ಷಿಸುವುದಕ್ಕೆ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:1
8 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.


ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.


ಬೆಟ್ಟದ ಮೇಲಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ,


ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್, ಶಿಮ್ರೋನ್.


ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.


ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಾಯೇಲರನ್ನು ಪಾಲಿಸಿದ ನಂತರ, ಅವನು ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು.


ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.


ಯೆಪ್ತಾಹನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲರ ನ್ಯಾಯಪಾಲಕನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು