Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಅವರು ಸರ್ವೇಶ್ವರನಿಗೆ, “ನಾವು ನಮ್ಮ ದೇವರಾದ ನಿಮ್ಮನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವೆ,” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅವರು ಯೆಹೋವನಿಗೆ - ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದೇವೆ ಎಂದು ಮೊರೆಯಿಡಲು ಆತನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರು, “ನಾವು ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದೇವೆ. ನಾವು ನಮ್ಮ ದೇವರನ್ನು ಬಿಟ್ಟು ಸುಳ್ಳುದೇವರಾದ ಬಾಳನನ್ನು ಪೂಜಿಸಿದ್ದೇವೆ” ಎಂದು ಮರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಕೂಗಿ, “ನಮ್ಮ ದೇವರನ್ನು ಬಿಟ್ಟು, ಬಾಳನನ್ನು ಸೇವಿಸಿದ್ದರಿಂದ, ನಾವು ನಿಮಗೆ ವಿರೋಧವಾಗಿ ಪಾಪಮಾಡಿದೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:10
11 ತಿಳಿವುಗಳ ಹೋಲಿಕೆ  

ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಹೊರತಂದನು.


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.


ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.


ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.


ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು