Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೂ ನೀವು ಮತ್ತೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸುತ್ತಾ ಬಂದಿರಿ; ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ತಿರಿಗಿ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ; ಆದದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನೀವು ನನ್ನನ್ನು ತ್ಯಜಿಸಿದಿರಿ. ನೀವು ಬೇರೆ ದೇವರುಗಳನ್ನು ಪೂಜಿಸಿದಿರಿ. ಆದ್ದರಿಂದ ನಾನು ಮತ್ತೆ ನಿಮ್ಮನ್ನು ರಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:13
11 ತಿಳಿವುಗಳ ಹೋಲಿಕೆ  

“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.


“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.


ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.


ಆಗ ಪ್ರವಾದಿಯಾದ‍ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು