Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಇಸ್ರೇಲರು ಅನ್ಯದೇವರುಗಳನ್ನು ತೊರೆದು ಯೆಹೋವನನ್ನು ಆರಾಧಿಸಲು ಆರಂಭಿಸಿದರು. ಅವರು ಕಷ್ಟಪಡುತ್ತಿರುವುದನ್ನು ನೋಡಿ ಯೆಹೋವನು ಮರುಕಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:16
27 ತಿಳಿವುಗಳ ಹೋಲಿಕೆ  

ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.


ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,


ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.


ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.


ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.


ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.


ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು.


ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.


“ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದನು. ಅವರು ಆತನಿಗೆ, “ಕರ್ತನೇ, ಬಂದು ನೋಡು” ಎಂದರು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.


ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.


ನನ್ನ ಮನಸ್ಸು ನೊಂದುಹೋಗಿತ್ತು; ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.


ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು.


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು