Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಂಡರು. ಇಸ್ರಯೇಲರು ಕೂಡಿ ಮಿಚ್ಫೆಯಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳುಕೊಳ್ಳಲು ಇಸ್ರಾಯೇಲ್ಯರು ಕೂಡಿ ವಿುಚ್ಪೆಯಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಮ್ಮೋನಿಯರು ಯುದ್ಧಕ್ಕೆಂದು ಒಂದೆಡೆ ಸೇರಿದರು. ಅವರು ಗಿಲ್ಯಾದ್‌ನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇಸ್ರೇಲರು ಒಂದೆಡೆ ಸೇರಿಕೊಂಡರು. ಅವರ ಪಾಳೆಯವು ಮಿಚ್ಛೆಯಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:17
9 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.


ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.


ಅದಲ್ಲದೆ ಅವನು, “ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು” ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು


ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.


ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.


ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.


ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು.


ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,


ಅವರು ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು” ಎಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು