ನ್ಯಾಯಸ್ಥಾಪಕರು 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಗಿಲ್ಯಾದಿನ ಜನರು ಹಾಗು ಅಧಿಪತಿಗಳು, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕಬಲ್ಲವನಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡಬಹುದಲ್ಲಾ,” ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಗಿಲ್ಯಾದಿನ ಜನರೂ ಅಧಿಪತಿಗಳೂ - ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನಾವನು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡೇವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುತ್ತಿದ್ದ ಜನನಾಯಕರು, “ಅಮ್ಮೋನಿಯರ ಮೇಲೆ ಧಾಳಿಮಾಡಲು ಯಾರು ನಮ್ಮ ಮುಂದಾಳಾಗುತ್ತಾರೋ ಆ ವ್ಯಕ್ತಿಯೇ ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುವ ಜನರೆಲ್ಲರಿಗೂ ನಾಯಕನಾಗುತ್ತಾನೆ” ಎಂದು ಸಾರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಗಿಲ್ಯಾದಿನ ಜನರೂ, ಪ್ರಧಾನರೂ ಒಬ್ಬರಿಗೊಬ್ಬರು, “ಯಾವನು ಅಮ್ಮೋನಿಯರ ಮೇಲೆ ಯುದ್ಧಮಾಡಲಾರಂಭಿಸುವನೋ, ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ತಲೆಯಾಗಿರುವನು,” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿ |