ನ್ಯಾಯಸ್ಥಾಪಕರು 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು. ಅಧ್ಯಾಯವನ್ನು ನೋಡಿ |