Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಗಿಲ್ಯಾದನಿಗೆ ಹೆಂಡತಿಯಲ್ಲೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಗಿಲ್ಯಾದನಿಗೆ ಹೆಂಡತಿಯಲ್ಲಿಯೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ - ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಗಿಲ್ಯಾದನ ಹೆಂಡತಿಗೆ ಅನೇಕ ಜನ ಮಕ್ಕಳಿದ್ದರು. ಆ ಮಕ್ಕಳು ದೊಡ್ಡವರಾದ ಮೇಲೆ ಯೆಫ್ತಾಹನನ್ನು ಇಷ್ಟಪಡಲಿಲ್ಲ. ಯೆಫ್ತಾಹನು ತನ್ನ ಹುಟ್ಟೂರನ್ನು ಬಿಡುವಂತೆ ಆ ಮಕ್ಕಳು ಒತ್ತಾಯಮಾಡಿದರು. ಅವರು ಅವನಿಗೆ, “ನೀನು ನಮ್ಮ ತಂದೆಯ ಆಸ್ತಿಯಲ್ಲಿ ಯಾವ ಭಾಗವನ್ನೂ ಪಡೆಯಲಾರೆ. ನೀನು ವೇಶ್ಯೆಯ ಮಗ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಪುತ್ರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ, “ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ. ಏಕೆಂದರೆ ನೀನು ಪರಸ್ತ್ರೀಯ ಮಗನು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:2
10 ತಿಳಿವುಗಳ ಹೋಲಿಕೆ  

ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.


ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು.


ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.


ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?


ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.


ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ.


ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.


ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.


ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು