Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರ ದೇವರಾದ ಸರ್ವೇಶ್ವರ ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರ ದೇವರಾದ ಯೆಹೋವನು ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವತಂತ್ರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಇಸ್ರೇಲರ ದೇವರಾದ ಯೆಹೋವನು ಇಸ್ರೇಲರಿಗೆ ಸೀಹೋನ ಮತ್ತು ಅವನ ಜನರನ್ನು ಸೋಲಿಸಲು ಸಹಾಯ ಮಾಡಿದನು. ಆದ್ದರಿಂದ ಅಮೋರಿಯರ ಪ್ರದೇಶವು ಇಸ್ರೇಲರ ಸ್ವತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೀಹೋನನನ್ನೂ, ಅವನ ಸಕಲ ಜನರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಇಸ್ರಾಯೇಲರು ಸೀಹೋನನನ್ನೂ, ಅವನ ಸಕಲ ಜನರನ್ನೂ ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇಲರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:21
8 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.


ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.


ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಆಗ ಯೆಹೋವನು ಯೆಹೋಶುವನಿಗೆ “ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಹಾಗೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.


ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?


ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು