Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಇಸ್ರಾಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ, ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀಗೆ ಇಸ್ರಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗೆ ಇಸ್ರಾಯೇಲ್ಯರು ಅರ್ನೋನಿನಿಂದ ಯಬ್ಬೋಕಿನವರೆಗೂ ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತವನ್ನೆಲ್ಲಾ ವಶಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲರು ಅಮೋರಿಯರ ಎಲ್ಲ ಪ್ರದೇಶವನ್ನು ತೆಗೆದುಕೊಂಡರು. ಆ ಪ್ರದೇಶವು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಅರಣ್ಯದಿಂದ ಜೋರ್ಡನ್ ನದಿಯವರೆಗೂ ಹಬ್ಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅರ್ನೋನಿನಿಂದ ಯಬ್ಬೋಕಿನವರೆಗೂ, ಮರುಭೂಮಿಯಿಂದ ಯೊರ್ದನಿನವರೆಗೂ ಇರುವ ಅಮೋರಿಯರ ಮೇರೆಯಾದ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:22
3 ತಿಳಿವುಗಳ ಹೋಲಿಕೆ  

ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.


ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.


ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು