Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಇಸ್ರಯೇಲರ ದೇವರಾದ ಸರ್ವೇಶ್ವರ ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್‍ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಇಸ್ರೇಲರ ದೇವರಾದ ಯೆಹೋವನು ಅಮೋರಿಯರನ್ನು ಅವರ ದೇಶದಿಂದ ಬಲವಂತವಾಗಿ ಹೊರಗಟ್ಟಿ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟನು. ಈಗ ಇಸ್ರೇಲರು ಈ ಪ್ರದೇಶವನ್ನು ಬಿಡುವಂತೆ ನೀನು ಮಾಡಬಹುದೆಂದು ತಿಳಿದುಕೊಂಡಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಅಮೋರಿಯರನ್ನು ತಮ್ಮ ಜನರಾದ ಇಸ್ರಾಯೇಲಿನ ಮುಂದೆ ಹೊರಡಿಸಿರುವಾಗ, ನೀನು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:23
5 ತಿಳಿವುಗಳ ಹೋಲಿಕೆ  

ಹೀಗೆ ಇಸ್ರಾಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ, ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.


ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.


ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು.


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು