Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಪ್ತಾಹನು ವಿುಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವದಕ್ಕಾಗಿ ಬಂದಳು. ಆಕೆಯು ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೆಫ್ತಾಹನು ಮಿಚ್ಛೆಗೆ ಹಿಂದಿರುಗಿದನು. ಯೆಫ್ತಾಹನು ತನ್ನ ಮನೆಗೆ ಹೋಗುತ್ತಿರಲು ಅವನನ್ನು ಎದುರುಗೊಳ್ಳಲು ಅವನ ಮಗಳು ಮನೆಯಿಂದ ಹೊರಗೆ ಬಂದಳು. ಅವಳು ದಮ್ಮಡಿ ಬಡಿಯುತ್ತ ನಾಟ್ಯವಾಡುತ್ತಿದ್ದಳು. ಅವಳು ಅವನ ಒಬ್ಬಳೇ ಮಗಳಾಗಿದ್ದಳು. ಯೆಫ್ತಾಹನಿಗೆ ಬೇರೆ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇರಲಿಲ್ಲ. ಯೆಫ್ತಾಹನು ಅವಳನ್ನು ತುಂಬ ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಫ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಹಿಂದಿರುಗಿ ಬರುವಾಗ, ಅವನ ಮಗಳು ದಮ್ಮಡಿಗಳಿಂದಲೂ, ನಾಟ್ಯದಿಂದಲೂ ಅವನನ್ನು ಎದುರುಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು. ಅವಳ ಹೊರತಾಗಿ ಅವನಿಗೆ ಮಗನಾಗಲಿ, ಮಗಳಾಗಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:34
18 ತಿಳಿವುಗಳ ಹೋಲಿಕೆ  

ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.


ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.


ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,


ಆಗ ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು.


ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.


ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.


ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ.


ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.


ಮಿಚ್ಪೆ, ಕೆಫೀರಾ, ಮೋಚಾ,


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು