ನ್ಯಾಯಸ್ಥಾಪಕರು 11:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಕೆಯನ್ನು ಕಾಣುತ್ತಲೆ ಅವನು ದುಃಖತಾಳಲು ಆಗದೆ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ ನನ್ನ ಮಗಳೇ, ನೀನು ನನ್ನನ್ನು ಎಂಥಾ ಯಾತನೆಗೆ ಈಡುಮಾಡಿದೆ; ನನಗೆ ಮಹಾಸಂಕಟವನ್ನುಂಟುಮಾಡಿದೆ! ನಾನು ಬಾಯಾರೆ ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾಗದು,” ಎಂದು ಕೂಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆಕೆಯನ್ನು ಕಾಣುತ್ತಲೆ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು - ಅಯ್ಯೋ ನನ್ನ ಮಗಳೇ, ಮಗಳೇ, ನೀನು ನನ್ನನ್ನು ಕುಗ್ಗಿಸೇ ಬಿಟ್ಟಿಯಲ್ಲಾ; ನನಗೆ ಮಹಾಸಂಕಟವನ್ನುಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು ಎಂದು ಕೂಗಿಕೊಳ್ಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ತನ್ನ ಮನೆಯಿಂದ ಹೊರ ಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ತಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳುಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು,” ಎಂದನು. ಅಧ್ಯಾಯವನ್ನು ನೋಡಿ |