Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಕೆಯು ತಿರುಗಿ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆಕೆ ಪುನಃ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಆಲಿಸು; ಎರಡು ತಿಂಗಳುಗಳವರೆಗೆ ನನ್ನನ್ನು ಬಿಡು, ನಾನು ನನ್ನ ಗೆಳತಿಯರೊಡನೆ ಗುಡ್ಡಪ್ರದೇಶಗಳಿಗೆ ಹೋಗಿ ನನ್ನ ಕನ್ಯಾವಸ್ಥೆಗಾಗಿ ಗೋಳಾಡುವೆನು,” ಎಂದಳು. ಅವನು, “ಎರಡು ತಿಂಗಳ ತನಕ ಹೋಗಿ ಬಾ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಕೆಯು ತಿರಿಗಿ ತನ್ನ ತಂದೆಗೆ - ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳವರೆಗೆ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು ಅನ್ನಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೆಫ್ತಾಹನ ಮಗಳು ತನ್ನ ತಂದೆಗೆ, “ನನಗೋಸ್ಕರ ಒಂದು ಕೆಲಸವನ್ನು ಮಾಡು. ಎರಡು ತಿಂಗಳುಗಳವರೆಗೆ ನನ್ನನ್ನು ಒಬ್ಬಂಟಿಗಳಾಗಿ ಇರಲು ಬಿಡು. ನಾನು ಬೆಟ್ಟಪ್ರದೇಶಕ್ಕೆ ಹೋಗುತ್ತೇನೆ. ನಾನು ಮದುವೆ ಮಾಡಿಕೊಳ್ಳುವುದಿಲ್ಲ ಮತ್ತು ಮಕ್ಕಳನ್ನು ಹೆರುವದಿಲ್ಲ. ನಾನು ಮತ್ತು ನನ್ನ ಗೆಳತಿಯರು ಹೋಗಿ ಒಟ್ಟಾಗಿ ಅಳುತ್ತೇವೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇದಲ್ಲದೆ ಅವಳು ತನ್ನ ತಂದೆಗೆ, “ಈ ಕಾರ್ಯವು ನನಗೆ ಆಗಲಿ. ಆದರೆ ನಾನೂ, ನನ್ನ ಗೆಳತಿಯರೂ ಕೂಡ ನನ್ನ ಕನ್ಯಾವಸ್ಥೆಗಾಗಿ ಬೆಟ್ಟಗಳ ಮೇಲೆ ಹೋಗಿ, ನನ್ನ ಗೆಳತಿಯರ ಸಂಗಡ ಅಳುವುದಕ್ಕೆ ನನಗೆ ಎರಡು ತಿಂಗಳು ಸಮಯವನ್ನು ಕೊಡು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:37
4 ತಿಳಿವುಗಳ ಹೋಲಿಕೆ  

“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.


ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.


ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು.


ಅವನು, “ಎರಡು ತಿಂಗಳ ತನಕ ಹೋಗಿ ಬಾ” ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು