Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್‍ದೇಶದಿಂದ ಕರೆದುಕೊಂಡು ಬರುವದಕ್ಕಾಗಿ ಅಲ್ಲಿಗೆ ಹೋಗಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಮ್ಮೋನಿಯರು ಯುದ್ಧ ಪ್ರಾರಂಭಿಸಿದ ತರುವಾಯ ಗಿಲ್ಯಾದಿನ ನಾಯಕರು ಯೆಫ್ತಾಹನ ಹತ್ತಿರ ಹೋದರು. ಯೆಫ್ತಾಹನು ಟೋಬ್ ದೇಶವನ್ನು ಬಿಟ್ಟು ಗಿಲ್ಯಾದಿಗೆ ಬರಬೇಕೆಂಬುದು ಅವರ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ, ಗಿಲ್ಯಾದಿನ ಹಿರಿಯರು ಯೆಫ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರಲು ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:5
12 ತಿಳಿವುಗಳ ಹೋಲಿಕೆ  

ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.


ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.


ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.


ಅವರು ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು” ಎಂದು ಬೇಡಿಕೊಂಡರು.


ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.


ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು