Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಅವರಿಗೆ, “ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಓಡಿಸಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ?” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನು ಅವರಿಗೆ, “ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಅಟ್ಟಿಬಿಟ್ಟವರು ನೀವೇ ಅಲ್ಲವೇ? ನಿಮಗೆ ಕಷ್ಟಬಂದಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಅವರಿಗೆ - ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಅಟ್ಟಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಗಿಲ್ಯಾದಿನ ಹಿರಿಯರಿಗೆ ಯೆಫ್ತಾಹನು, “ನನ್ನ ತಂದೆಯ ಮನೆಯನ್ನು ಬಿಡುವಂತೆ ನೀವು ನನಗೆ ಒತ್ತಾಯ ಮಾಡಿದಿರಿ; ನೀವು ನನ್ನನ್ನು ದ್ವೇಷಿಸುತ್ತೀರಿ. ಆದರೆ ಕಷ್ಟದಲ್ಲಿ ನೀವು ನನ್ನ ಬಳಿಗೆ ಬರುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನೀವಲ್ಲವೇ ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಹೊರಡಿಸಿದವರು? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:7
8 ತಿಳಿವುಗಳ ಹೋಲಿಕೆ  

ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು,


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.


ಅವರು ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು” ಎಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು