Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು, “ಆದುದರಿಂದಲೇ ಈಗ ತಿರುಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವುದಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ನಾಯಕನಾಗಿರುವಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು, “ಆದುದರಿಂದಲೇ ಈಗ ಪುನಃ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೆ ಶಿರಸ್ಸಾಗಿರುವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು - ಆದದರಿಂದಲೇ ಈಗ ತಿರಿಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ಶಿರಸ್ಸಾಗಿರುವಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ಕಷ್ಟ ಬಂದಿರುವುದರಿಂದಲೇ ನಿನ್ನಲ್ಲಿಗೆ ಬಂದಿದ್ದೇವೆ. ದಯವಿಟ್ಟು ನಮ್ಮೊಡನೆ ಬಾ; ಅಮ್ಮೋನಿಯರ ವಿರುದ್ಧ ಯುದ್ಧ ಮಾಡು. ಗಿಲ್ಯಾದಿನಲ್ಲಿ ವಾಸಮಾಡುತ್ತಿರುವ ಜನರೆಲ್ಲರಿಗೂ ನೀನು ನಾಯಕನಾಗುವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನೀನು ನಮ್ಮೊಂದಿಗೆ ಬಂದು ಅಮ್ಮೋನ್ಯರಿಗೆ ವಿರೋಧವಾಗಿ ಯುದ್ಧಮಾಡಿ, ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ, ಈಗ ನಿನ್ನ ಬಳಿಗೆ ತಿರುಗಿ ಬಂದೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:8
8 ತಿಳಿವುಗಳ ಹೋಲಿಕೆ  

ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.


ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.


ಅದಕ್ಕೆ ಫರೋಹನು ಅವರಿಗೆ, “ನಿಮ್ಮ ದೇವರಾದ ಯೆಹೋವನಿಗೆ ಅರಣ್ಯದಲ್ಲಿ ಯಜ್ಞಮಾಡುವಂತೆ ನಾನು ನಿಮಗೆ ಅಪ್ಪಣೆ ಕೊಡುತ್ತೇನೆ. ಆದರೆ ಬಹಳ ದೂರ ಹೋಗಬಾರದು. ನನಗೋಸ್ಕರ ಪ್ರಾರ್ಥನೆ ಮಾಡಿರಿ” ಎಂದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.


ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು