ನ್ಯಾಯಸ್ಥಾಪಕರು 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎಫ್ರಯಿಮ್ಯರು ಒಟ್ಟುಗೂಡಿ ಜೋರ್ಡನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋದರು. ಅವನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಏಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಫ್ರಾಯೀಮ್ಯರು ಕೂಡಿಕೊಂಡು ಯೊರ್ದನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋಗಿ ಅವನಿಗೆ - ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಎಫ್ರಾಯೀಮ್ಯರು ತಮ್ಮ ಸೈನಿಕರೆಲ್ಲರನ್ನು ಒಂದು ಕಡೆ ಸೇರಿಸಿದರು. ಆಮೇಲೆ ಅವರು ನದಿಯನ್ನು ದಾಟಿ ಝಾಫೋನ್ ನಗರಕ್ಕೆ ಬಂದರು. ಅವರು ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧ ಮಾಡುವಾಗ ಸಹಾಯಕ್ಕಾಗಿ ನಮ್ಮನ್ನು ಏಕೆ ಕರೆಯಲಿಲ್ಲ? ನಿನ್ನನ್ನು ಮನೆಯೊಳಗೆ ಹಾಕಿ ನಿನ್ನ ಮನೆಯನ್ನು ಸುಟ್ಟುಬಿಡುತ್ತೇವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಎಫ್ರಾಯೀಮನ ಜನರು ಕೂಡಿಕೊಂಡು ಉತ್ತರದ ಜಪೋನಿಗೆ ಹೋಗಿ, ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಹೋದಾಗ, ನಮ್ಮನ್ನು ಏಕೆ ನಿನ್ನ ಸಂಗಡ ಹೋಗಲು ಕರೆಕಳುಹಿಸಲಿಲ್ಲ? ನಾವು ನಿನ್ನ ಮನೆಯನ್ನು ನಿನ್ನನ್ನು ಸಹಿತವಾಗಿ ಬೆಂಕಿಯಿಂದ ಸುಟ್ಟುಬಿಡುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿ |