ನ್ಯಾಯಸ್ಥಾಪಕರು 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀವು ಸಹಾಯ ಮಾಡುವುದಿಲ್ಲ ಎಂದು ತಿಳಿದು ಪ್ರಾಣವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆ; ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿದರು. ಹೀಗಿರಲು, ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ಸಹಾಯಮಾಡುವದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು; ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವದೇಕೆ ಎಂದು ಉತ್ತರಕೊಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀವು ನಮ್ಮ ಸಹಾಯಕ್ಕೆ ಬರುವುದಿಲ್ಲವೆಂದು ತಿಳಿದಾಗ ನಾನು ನನ್ನ ಜೀವವನ್ನೇ ಗಂಡಾಂತರಕ್ಕೆ ಒಡ್ಡಿದೆ. ಅಮ್ಮೋನಿಯರ ವಿರುದ್ಧ ಯುದ್ಧಮಾಡಲು ನಾನು ನದಿಯನ್ನು ದಾಟಿಹೋದೆ. ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯ ಮಾಡಿದನು. ಈಗ ನೀವು ನನ್ನ ಸಂಗಡ ಯುದ್ಧ ಮಾಡುವುದಕ್ಕಾಗಿ ಏಕೆ ಬಂದಿದ್ದೀರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ನನ್ನನ್ನು ರಕ್ಷಿಸುವುದಿಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು, ಅಮ್ಮೋನಿಯರಿಗೆ ವಿರೋಧವಾಗಿ ಹೋದೆನು. ಯೆಹೋವ ದೇವರು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ನೀವು ನನ್ನ ಸಂಗಡ ಯುದ್ಧಮಾಡುವುದಕ್ಕೆ ಈ ಹೊತ್ತು ನನಗೆ ವಿರೋಧವಾಗಿ ಏಕೆ ಬಂದಿರಿ?” ಎಂದನು. ಅಧ್ಯಾಯವನ್ನು ನೋಡಿ |