Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಅಲ್ಲವೆಂದರೆ ಅವನಿಗೆ, “ನೀನು ಷಿಬ್ಬೋಲೆತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು, “ಇಲ್ಲ” ಎಂದರೆ ಅವನಿಗೆ, “ನೀನು ‘ಷಿಬ್ಬೋಲೆತ್’ ಅನ್ನು” ಎಂದು ಹೇಳುತ್ತಿದ್ದರು. ಹಾಗೆ ಉಚ್ಚಸರಿಸಲಿಕ್ಕೆ ಬಾರದೆ ಅವನು “ಸಿಬ್ಬೋಲೆತ್” ಅನ್ನುತ್ತಿದ್ದನು. ಕೂಡಲೇ ಅವರು ಅವನನ್ನು ಹಿಡಿದು ಜೋರ್ಡನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಯಿಮರಲ್ಲಿ ನಾಲ್ವತ್ತೆರಡು ಸಾವಿರ ಜನರು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಅಲ್ಲವೆಂದರೆ ಅವನಿಗೆ - ನೀನು ಷಿಬ್ಬೋಲೆತ್ ಅನ್ನು ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಚರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು “ಸಿಬ್ಬೋಲೆತ್” ಎಂದು ಉಚ್ಚರಿಸುತ್ತಿದ್ದರು. ಆ ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವನು ಹಾಗೆ ಹೇಳಲಾರದೆ, “ಸಿಬ್ಬೋಲೆತ್,” ಎಂದು ಉಚ್ಛರಿಸುವವನನ್ನು ಹಿಡಿದು ಯೊರ್ದನ್ ನದಿ ರೇವುಗಳ ಬಳಿಯಲ್ಲಿ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:6
12 ತಿಳಿವುಗಳ ಹೋಲಿಕೆ  

ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ” ಎಂದರು.


ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು


ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.


ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.


ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.


ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.


ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.


ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು.


ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರ್ಷ ಪಾಲಿಸಿದ ನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಒಂದು ಪಟ್ಟಣದಲ್ಲಿ ಸಮಾಧಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು