Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಪ್ತಾಹನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲರ ನ್ಯಾಯಪಾಲಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆಪ್ತಾಹನ ತರುವಾಯ ಬೆತ್ಲೆಹೇಮಿನವನಾದ ಇಬ್ಚಾನನು ಇಸ್ರಯೇಲರ ನ್ಯಾಯಸ್ಥಾಪಕನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನ ತರುವಾಯ ಬೇತ್ಲೆಹೇವಿುನವನಾದ ಇಬ್ಚಾನನು ಇಸ್ರಾಯೇಲ್ಯರ ಪಾಲಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಫ್ತಾಹನ ತರುವಾಯ ಇಬ್ಜಾನ ಎಂಬವನು ಇಸ್ರೇಲರ ನ್ಯಾಯಾಧೀಶನಾಗಿದ್ದನು. ಇಬ್ಜಾನನು ಬೆತ್ಲೆಹೇಮ್ ನಗರದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:8
10 ತಿಳಿವುಗಳ ಹೋಲಿಕೆ  

ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಕೇನಿಯರೂ, ಕೆನಿಜೀಯರೂ, ಕದ್ಮೋನಿಯರೂ,


ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರ್ಷ ಪಾಲಿಸಿದ ನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಒಂದು ಪಟ್ಟಣದಲ್ಲಿ ಸಮಾಧಿ ಮಾಡಿದರು.


ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ, ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು, ಗಂಡುಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.


ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು.


ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.


ಯೆಹೂದದ ಬೇತ್ಲೆಹೇಮಿನವನೂ, ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು ಉಪಜೀವನಕ್ಕೆ ಅನುಕೂಲವಾಗುವಂತೆ


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು