Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಲ್ವತ್ತು ವರುಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರು ಮತ್ತೆ ಯೆಹೋವನಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಆದ್ದರಿಂದ ಫಿಲಿಷ್ಟಿಯರು ನಲವತ್ತು ವರ್ಷ ಅವರನ್ನು ಆಳುವಂತೆ ಯೆಹೋವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ, ಯೆಹೋವ ದೇವರು ಅವರನ್ನು ನಾಲ್ವತ್ತು ವರ್ಷದವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:1
16 ತಿಳಿವುಗಳ ಹೋಲಿಕೆ  

ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್‌ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.


ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಯರ ಕೈಗೆ ಒಪ್ಪಿಸಿದನು.


ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,


ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.


ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.


ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.


ಅವನ ಶವವನ್ನು ಎಫ್ರಾಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದ ಮೇಲಿರುವ ಪಿರಾತೋನಿನಲ್ಲಿ ಸಮಾಧಿಮಾಡಿದರು.


ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು.


ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ವರೆಗೆ ಪಾಲಿಸಿದನು.


ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು” ಎಂದು ಹೇಳಿಕೊಂಡು


ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.


ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು