Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತನಾಡಿದವನು ನೀನೋ” ಎಂದು ಕೇಳಲು ಅವನು, “ಹೌದು, ನಾನೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತಾಡಿದವರು ನೀವೋ,” ಎಂದು ಕೇಳಲು ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ - ಮೊನ್ನೆ ಈಕೆಯೊಡನೆ ಮಾತಾಡಿದವನು ನೀನೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಾನೋಹನು ಎದ್ದು ತನ್ನ ಹೆಂಡತಿಯನ್ನು ಹಿಂಬಾಲಿಸಿದನು. ಅವನು ಆ ಮನುಷ್ಯನ ಹತ್ತಿರ ಬಂದಾಗ, “ನನ್ನ ಹೆಂಡತಿಯ ಜೊತೆಗೆ ಹಿಂದೆ ಮಾತನಾಡಿದ ಮನುಷ್ಯನು ನೀನೋ?” ಎಂದು ಕೇಳಿದನು. ಆ ದೇವದೂತನು, “ಹೌದು, ನಾನೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಮಾನೋಹನು ಎದ್ದು ತನ್ನ ಹೆಂಡತಿಯೊಡನೆ ಹೋಗಿ, ಅವನ ಬಳಿಗೆ ಬಂದು, ಅವನಿಗೆ, “ಈ ಸ್ತ್ರೀಯ ಸಂಗಡ ಮಾತನಾಡಿದವನು ನೀನೋ?” ಎಂದನು. ಅವನು, “ನಾನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:11
5 ತಿಳಿವುಗಳ ಹೋಲಿಕೆ  

ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು.


ಆಗ ಮಾನೋಹನು, “ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ಬೆಳೆಸಬೇಕು” ಎಂದು ಕೇಳಲು


ಯೆಹೋವನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ.


ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿದ್ದೀ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಕೈ ಈಹೊತ್ತು ನೆರವೇರಿಸಿದೆ.


ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು