ನ್ಯಾಯಸ್ಥಾಪಕರು 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು” ಅಂದನು. ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಬಲಿದಾನ ಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಸರ್ವೇಶ್ವರನಿಗೆ ಸಮರ್ಪಿಸು,” ಎಂದನು. ಅವನು ಸರ್ವೇಶ್ವರನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು - ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು ಅಂದನು. ಅವನು ಯೆಹೋವನ ದೂತನೆಂಬದು ಮಾನೋಹನಿಗೆ ಗೊತ್ತಿದ್ದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ಹೋಗದಂತೆ ನಿಲ್ಲಿಸಿಕೊಂಡರೂ ಸಹ ನಾನು ನಿಮ್ಮ ಆಹಾರವನ್ನು ಊಟ ಮಾಡುವುದಿಲ್ಲ. ಏನಾದರೂ ಕೊಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸು” ಅಂದನು. (ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ, ನಾನು ನಿನ್ನ ರೊಟ್ಟಿಯನ್ನು ತಿನ್ನುವುದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ, ಅದನ್ನು ಯೆಹೋವ ದೇವರಿಗೆ ಅರ್ಪಿಸಬೇಕು,” ಎಂದನು. ಅಧ್ಯಾಯವನ್ನು ನೋಡಿ |