Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತನ್ನ ಹೆಂಡತಿಗೆ, “ನಾವು ಸಾಯುವುದು ನಿಜ, ದೇವರನ್ನು ಕಣ್ಣಾರೆ ಕಂಡೆವಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಮಾನೋಹನು ಆತ ಸರ್ವೇಶ್ವರನ ದೂತನೆಂದು ತಿಳಿದು ತನ್ನ ಹೆಂಡತಿಗೆ, “ನಾವು ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾವು ಸಾಯಬೇಕು. ದೇವರನ್ನು ಕಣ್ಣಾರೆ ಕಂಡೆವಲ್ಲಾ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಂತರ ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಣ್ಣಾರೆ ಕಂಡೆವು, ಆದ್ದರಿಂದ ಖಂಡಿತವಾಗಿ ನಾವು ಸತ್ತುಹೋಗುತ್ತೇವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಂಡದ್ದರಿಂದ ನಿಶ್ಚಯವಾಗಿ ಸಾಯುವೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:22
11 ತಿಳಿವುಗಳ ಹೋಲಿಕೆ  

ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?


ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.


ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.


ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.


ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು