ನ್ಯಾಯಸ್ಥಾಪಕರು 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ದೇವರನ್ನು ಕಣ್ಣಾರೆ ಕಂಡೆವಲ್ಲಾ!” ಎಂದನು. ಆಕೆ ಅವನಿಗೆ, “ಸರ್ವೇಶ್ವರ ನಮ್ಮನ್ನು ಕೊಲ್ಲಬೇಕೆಂದಿದ್ದರೆ ಅವರು ನಮ್ಮ ಕೈಯಿಂದ ಬಲಿಯನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ. ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಹೇಳುತ್ತಿರಲಿಲ್ಲ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಕೆಯು ಅವನಿಗೆ - ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿದ್ದಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿದ್ದಿಲ್ಲ, ಹೇಳುತ್ತಿದ್ದಿಲ್ಲ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಅವನ ಹೆಂಡತಿಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬಯಸುವುದಿಲ್ಲ. ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಆತನು ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಇದನ್ನೆಲ್ಲ ನಮಗೆ ಹೇಳುತ್ತಿರಲಿಲ್ಲ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನ ಹೆಂಡತಿ ಅವನಿಗೆ, “ಯೆಹೋವ ದೇವರು ನಮ್ಮನ್ನು ಕೊಲ್ಲಬೇಕೆಂದಿದ್ದರೆ, ಅವರು ನಮ್ಮ ಕೈಯಿಂದ ದಹನಬಲಿಯನ್ನೂ, ಅರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯಮಾಡುತ್ತಿರಲಿಲ್ಲ,” ಎಂದಳು. ಅಧ್ಯಾಯವನ್ನು ನೋಡಿ |