ನ್ಯಾಯಸ್ಥಾಪಕರು 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಾನೋಹನು ಇದನ್ನು ಕೇಳಿ ಸರ್ವೇಶ್ವರನಿಗೆ, “ಸ್ವಾಮೀ, ದಯವಿರಲಿ; ನೀವು ಕಳುಹಿಸಿದ ದೇವಪುರುಷ ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿರುವ ಮಗುವಿಗಾಗಿ ಮಾಡಬೇಕಾದುದ್ದನ್ನು ನಮಗೆ ಬೋಧಿಸಲಿ,” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಾನೋಹನು ಇದನ್ನು ಕೇಳಿ ಯೆಹೋವನಿಗೆ - ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಮಾನೋಹನು ಯೆಹೋವನಿಗೆ, “ಸ್ವಾಮೀ, ಆ ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಿಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಮಾನೋಹನು ಯೆಹೋವ ದೇವರಿಗೆ ಬೇಡಿಕೊಂಡು, “ನನ್ನ ಕರ್ತದೇವರೇ, ನೀವು ಕಳುಹಿಸಿದ ದೇವರ ಮನುಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು, ಹುಟ್ಟುವ ಕೂಸಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿ |