Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ, “ನಾನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗುತ್ತೇನೆ” ಅಂದನು. ಅದಕ್ಕೆ ಅವನು, “ಹೋಗಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೆ ಹೋದನು. ಆಕೆಯ ತಂದೆ ಬಳಿಗೆ ಬಂದನು; “ನನ್ನ ಹೆಂಡತಿಯ ಒಳಗಿನ ಕೋಣೆಗೆ ಹೋಗಬಿಡು,” ಎಂದನು. ಅವನು, “ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ - ನನ್ನನ್ನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗಗೊಡಿಸು ಅನ್ನಲು ಅವನು - ಹೋಗಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಗೋಧಿಯ ಸುಗ್ಗಿಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡಲು ಹೋದನು. ಅವನು ತನ್ನ ಸಂಗಡ ಒಂದು ಮರಿಹೋತವನ್ನು ತೆಗೆದುಕೊಂಡು ಹೋದನು. ಆಕೆಯ ತಂದೆಗೆ ಅವನು, “ನನ್ನ ಹೆಂಡತಿಯ ಕೋಣೆಗೆ ಹೋಗಬೇಕು” ಎಂದನು. ಆದರೆ ಆಕೆಯ ತಂದೆಯು ಸಂಸೋನನನ್ನು ಒಳಗೆ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸ್ವಲ್ಪ ಸಮಯವಾದ ತರುವಾಯ, ಗೋಧಿಯ ಸುಗ್ಗಿಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡುವುದಕ್ಕೆ ಒಂದು ಮೇಕೆಯ ಮರಿಯನ್ನು ತೆಗೆದುಕೊಂಡುಹೋಗಿ, ಅವಳ ತಂದೆಗೆ, “ನನ್ನ ಹೆಂಡತಿಯ ಕೋಣೆಗೆ ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:1
5 ತಿಳಿವುಗಳ ಹೋಲಿಕೆ  

ಅವನು, “ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ” ಅಂದಾಗ ಆಕೆ, “ನೀನು ಆದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದ್ದಕ್ಕೆ,


ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.


ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು.


ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.


ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು